ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ನಟ ಪ್ರಥಮ್ ಅವರ ಮೇಲೆ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಯತ್ನ ಮಾಡಲಾಯಿತು ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ದರ್ಶನ್ ಅಭಿಮಾನಿಗಳ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಿರುಗೇಟು ನೀಡಲಾಗಿದೆ. ಪ್ರಥಮ್ ಅವರಿಗೆ ಕೆಲವು ಪ್ರಶ್ನೆಗಳನ್ನು ದರ್ಶನ್ ಅಭಿಮಾನಿಗಳು ಕೇಳಿದ್ದಾರೆ. ‘ಪ್ರಥಮ್ ಮೇಲೆ ಹಲ್ಲೆ ಪ್ರಕರಣದ ಸತ್ಯ ಹೊರ ಬಂದಿದೆ. ರೌಡಿಗಳ ಜೊತೆ ಹೋಗಿ ಅವರ ಕಾರ್ಯಕ್ರಮದಲ್ಲಿ ಅವರ ಹತ್ತಿರನೇ ತಿಂದು ಅವರಿಗೆ ರೇಗಿಸಿ ಬ್ರೆಡ್ ಚಿಪ್ಸ್ ಕೇಳಿ ಖಾರ ಬನ್ ತಿಂದ ಪ್ರಕರಣವಿದು’ ಎಂದು ದರ್ಶನ್ ಫ್ಯಾನ್ಸ್ ಬರೆದುಕೊಂಡಿದ್ದಾರೆ.
‘ನಮ್ಮ ಪ್ರಶ್ನೆ, ದರ್ಶನ್ ಅವರು ಜೈಲಲ್ಲಿ ಇದ್ದಾಗ ಅಭಿಮಾನಿಗಳಿಗೆ ಪ್ರಚೋದನೆ ಹೇಳಿಕೆ ನೀಡಿ ಕಾಮೆಂಟ್ ಮಾಡಿದವರ ವಿರುದ್ಧ ಸಾಲು ಸಾಲು ದೂರು ದಾಖಲಿಸಿದ ಕುತಂತ್ರಿಗೆ ಹಲ್ಲೆ ನಡೆದರೂ ದೂರು ನೀಡಿದಷ್ಟು ಒಳ್ಳೆ ಮನಸ್ಸು ಇದೆಯಾ? ಕಾರಣ ಇಷ್ಟೇ, ಅಂದು ಪೊಲೀಸ್ ದೂರು ನೀಡಲು ವೈದ್ಯರ ವರದಿ ಬೇಕು. ಸರ್ಕಾರಿ ಆಸ್ಪತ್ರೆಗೆ ಹೋದರೆ ವೈದ್ಯರ ಪರೀಕ್ಷೆಯಲ್ಲಿ ಕುಡಿದಿರುವುದು ಬೆಳಕಿಗೆ ಬರುತ್ತದೆ. ಕುಡುಕರ ಗಲಾಟೆ ಎಂದು ವರದಿ ನೀಡುತ್ತಾರೆ. ಎರಡು ಮೂರು ದಿನ ಕಳೆದರೆ ಸತ್ಯ ಯಾರಿಗೂ ತಿಳಿಯುವುದಿಲ್ಲ. ಇದು ನಿಮ್ಮ ಗೇಮ್ ಹಾಗೂ ನಿಮಗೆ ಪ್ರೋತ್ಸಾಹ ಧನ ಸಹಾಯ ಮಾಡುವವರ ಹುನ್ನಾರ. ಹೇಗಿದ್ರೂ ನೀವು ನಿರ್ದೇಶಕರು ಅಲ್ಲವೇ ಸ್ವಾಮಿ. ಕಥೆ ಚಿತ್ರಕಥೆ ಸಂಭಾಷಣೆ ಚೆನ್ನಾಗಿ ರಚನೆ ಮಾಡಿದ್ದೀರಿ’ ಎಂದಿದ್ದಾರೆ ದರ್ಶನ್ ಅಭಿಮಾನಿಗಳು.