ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ವರ್ಷ 10 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ 11 ದಿನಗಳ ಕಾಲ ನಡೆಯಲಿದೆ. ದಸರಾ ಇತಿಹಾಸದಲ್ಲೇ ಬಹುತೇಕ ಇದೇ ಮೊದಲ ಬಾರಿಗೆ 11 ದಿನದ ದಸರಾ ಬಂದಿದೆ.
ಪಂಚಾಂಗದ ತಿಥಿಗಳ ಪ್ರಕಾರ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಅಂದ್ರೆ 11 ದಿನ ದಸರಾ ಉತ್ಸವ ನಡೆಯಲಿದೆ. ಸೆ.24 ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರಿಯುವ ಕಾರಣ ದಸರಾ 11 ದಿನ ಆಗಲಿದೆ.
ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ದಸರಾ ನಡೆಯುತ್ತದೆ. ದಸರಾ ಪರಂಪರೆ ಶುರುವಾಗಿ 410 ವರ್ಷ ಕಳೆದಿದೆ. 410 ವರ್ಷಗಳಿಂದಲೂ 10 ದಿನ ದಸರಾ ನಡೆದಿದೆ. ಆದರೆ ಈ ಬಾರಿ 11 ದಿನ ದಸರಾ ನಡೆಯುವ ಮೂಲಕ ಹೊಸ ದಾಖಲೆ ಸೃಷ್ಟಿ ಆಗಲಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳ ಬಗ್ಗೆ ಧಾರ್ಮಿಕವಾಗಿ ಚರ್ಚೆಗಳು ಶುರುವಾಗಿವೆ. 1410 ರಿಂದ ಮೈಸೂರು ಸಂಸ್ಥಾನದ ಆಳ್ವಿಕೆಯಲ್ಲಿ ದಸರಾ ಆಚರಣೆ ನಡೆದಿದ್ದು 11 ದಿನ ದಸರಾ ನಡೆದ ಉದಾಹರಣೆಗಳಿಲ್ಲ. ಮಹಾಲಯ ಅಮಾವಾಸ್ಯೆಯ ಮರು ದಿನದಿಂದ ನವರಾತ್ರಿ ಶುರುವಾಗಿ 9 ದಿನಗಳ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯವಾಗಿದೆ.