ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.
ಪತ್ರಿಕಾ ವಿತರಕರ ಶ್ರಮ ಗುರುತಿಸಿ ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡೀ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿ ಗೌರವಿಸಿದೆ.
ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, ‘ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು’ ಎನ್ನುವ ಭರವಸೆ ನೀಡಿದ್ದರು.