ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ನಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪರೀಕ್ಷಾ ಕ್ರಮದ ಬಗ್ಗೆ ಚರ್ಚೆ ನಡೆದಿದ್ದು, ಇದೇ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರಲಿವೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಪರೀಕ್ಷೆಗೆ ಯಾವುದೇ ಗ್ಯಾಡ್ಜೆಟ್ಸ್ ತೆಗೆದುಕೊಂಡು ಹೋಗುವಂತಿಲ್ಲ, ಪರೀಕ್ಷೆಗೂ 15ನಿಮಿಷ ಮುನ್ನ ಕೊಠಡಿಯಲ್ಲಿ ಇರಬೇಕು. ಮಕ್ಕಳು ಪಾಸ್ ಆಗಲು ಮೂರು ಹಂತದ ಪ್ರಶ್ನೆಗಳನ್ನು ಉತ್ತರಿಸಬೇಕು ಎಂದಿದ್ದಾರೆ. ಪಿಯುಸಿ ನಂತರ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿವೆ ಎಂದಿದ್ದಾರೆ.