ಶಕ್ತಿಕೇಂದ್ರದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಇದೇ ಮೊದಲು: ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಶಕ್ತಿ ಕೇಂದ್ರದ ಇತಿಹಾಸದಲ್ಲೇ ಮೊದಲು. ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾಸಿರ್ ಹುಸೇನ್ ಅವರನ್ನು ಪತ್ರಕರ್ತರು ಪ್ರಶ್ನಸಿದರೆ, ಹಾರಿಕೆ ಉತ್ತರ ನೀಡುವ ಮೂಲಕ ಮಾಧ್ಯಮಗಳ ಮೇಲೆಯೇ ಗೂಂಡಾ ವರ್ತನೆ ತೋರಿದ ಮುಖಂಡನಿಗೂ ತಕ್ಕ ಶಾಸ್ತಿ ಆಗಬೇಕು ಎಂದರು.

ಪಾಕಿಸ್ತಾನದ ಮೆಂಟಾಲಿಟಿ ಹೊಂದಿರುವ ಕಾಂಗ್ರೆಸ್ ನಾಯಕರಿಗೆ ಅಲ್ಲಿನ ವಾಸ್ತವ ಸ್ಥಿತಿಯ ಬಗ್ಗೆ ಅರಿವಿಲ್ಲ. ಪಾಲಿಸ್ತಾನದ ಆರ್ಥಿಕ ಪರಿಸ್ಥಿತಿ ಘಟನಘೋರ ಸ್ಥಿತಿ ತಲುಪಿದೆ. ಭಾರದಂತಹ ರಾಷ್ಟ್ರಬೇಕು. ನರೇಂದ್ರ ಮೋದಿ ಅವರಂಥ ಪ್ರಧಾನಿ ಬೇಕು ಎಂದು ಸ್ವತಃ ಪಾಕಿಸ್ತಾನದ ಪ್ರಜೆಗಳು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಆದರೆ, ನಮ್ಮ ಅನ್ನ ಉಂಡವರೇ ದೇಶದ್ರೋಹಿ ಘೋಷಣೆ ಕೂಗುತ್ತಿರುವುದು ವಿಪರ್ಯಾಸ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!