ಇದೇ ಮೊದಲ ಬಾರಿಗೆ ರಾಮನವಮಿಗೆ ರಜೆ ಘೋಷಿಸಿದ ಬಂಗಾಳ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಶ್ಚಿಮ ಬಂಗಾಳ ಸರ್ಕಾರ ರಾಮನವಮಿ (Ram Navami) ದಿನವನ್ನು ಸಾರ್ವಜನಿಕ ರಜೆ (Public Holiday) ಎಂದು ಘೋಷಿಸಿದೆ.ಏಪ್ರಿಲ್​ 17 ರಂದು ರಾಮ ನವಮಿಗೂ ಮೊದಲು ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಈ ಸಂಬಂಧ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಮನವಮಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಲಾಗಿರುವುದು. ದುರ್ಗಾ ಪೂಜೆ ಮತ್ತು ಕಾಳಿ ಪೂಜೆ ಬಂಗಾಳದಲ್ಲಿ ಮೊದಲಿಂದಲೂ ಪ್ರಧಾನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆ ಎರಡು ಹಿಂದು ಹಬ್ಬಗಳಿಗೆ ಅಲ್ಲಿ ಸಾರ್ವತ್ರಿಕ ರಜೆ ಇದೆ. ರಾಮನವಮಿಗೆ ರಜೆ ಘೋಷಿಸಿದ್ದು ಇದೇ ಮೊದಲು. ಈ ಹಿಂದೆ ರಾಮನವಮಿ ಹಬ್ಬದಂದು ಮೆರವಣಿಗೆ ನಡೆಯುವ ವೇಳೆ ಬಂಗಾಳದ ಕೆಲವೆಡೆ ಹಿಂಸಾಚಾರಗಳಾಗಿ, ಬಂಗಾಳ ಸರ್ಕಾರದ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಅದರ ಬೆನ್ನಲ್ಲೇ ಲೋಕಸಭೆ ಚುನಾವಣೆಗೆ ಮುನ್ನ ಸರ್ಕಾರ ರಾಮನವಮಿಗೆ ರಜೆ ಘೋಷಿಸುವ ನಿರ್ಧಾರ ಮಾಡಿದೆ.

ಬಂಗಾಳ ಸರ್ಕಾರ ರಾಮನವಮಿಗೆ ರಜೆ ಘೋಷಿಸಿರುವ ಕ್ರಮವನ್ನು ವಿಪಕ್ಷವಾದ ಬಿಜೆಪಿ ಸ್ವಾಗತಿಸಿದೆಯಾದರೂ ಸರ್ಕಾರದ ನಡೆಗೆ ವ್ಯಂಗ್ಯ ಮಾಡಿದೆ. ಬಂಗಾಳದಲ್ಲಿ ಕಾಲ ಬದಲಾಗುತ್ತಿದ್ದು, ಸರ್ಕಾರ ರಾಮನವಮಿಗೆ ರಜೆ ಘೋಷಿಸುವುದು ಅನಿವಾರ್ಯವಾಯಿತು. ಹಿಂದು ವಿರೋಧಿ ಹಣೆಪಟ್ಟಿ ತೊಡೆದುಹಾಕಲು ಸಿಎಂ ಮಮತಾ ಬ್ಯಾನರ್ಜಿ ಈ ಕ್ರಮ ಕೈಗೊಂಡಿದ್ದಾರೆ. ಆದರೆ, ಜೈ ಶ್ರೀರಾಮ್ ಎಂದರೆ ಬೆಂಕಿಯಂತಾಗುವ ವ್ಯಕ್ತಿಯಿಂದ ಈ ನಡೆ ಬಹಳ ನಿಧಾನವಾಯಿತು ಎಂದು ಬಿಜೆಪಿ ನಾಯಕ ಅಮಿತ್ ಮಾಲವೀಯ ಲೇವಡಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!