ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು.ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು.
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಧರ್ಮಪತ್ನಿ ಸುದೇಶ್ ಧನಕರ್ ಅವರೊಂದಿಗೆ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಕಂಪನಿಯ ಉನ್ನತ ಅಧಿಕಾರಿಗಳು ಉಪ ರಾಷ್ಟ್ರಪತಿಗಳ ಜತೆಯಲ್ಲಿದ್ದರು.