ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಲೂರಿನ ಎಚ್‌ಎಸ್‌ಆರ್ ಲೇಔಟ್‌ನ ತನ್ನ ಮನೆಯಲ್ಲಿ ಕೊಲೆಗೀಡಾದ ನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಚಾಣಾಕ್ಷ ಅಧಿಕಾರಿ ಎಂದು ಹೆಸರು ಮಾಡಿದ್ದರು.
ಬಿಹಾರ ಮೂಲದ ಓಂ ಪ್ರಕಾಶ್, 1981ರ ಬ್ಯಾಚ್ ಐಪಿಎಸ್ ಅಧಿಕಾರಿ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಅವರು 2013 ಏಪ್ರಿಲ್ 17 ರಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ನಡೆದ ಸ್ಫೋಟ ಪ್ರಕರಣ ಹಾಗೂ 2014 ಡಿಸೆಂಬರ್ 28 ರಂದು ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಮರ್ಥವಾಗಿ ತನಿಖೆ ನಡೆಸಿ ಶಂಕಿತ ಉಗ್ರರನ್ನ ಬಂಧಿಸಿದ್ದರು.
ನಿವೃತ್ತಿಯ ಬಳಿಕ ಅವರು ಪತ್ನಿ ಹಾಗೂ ಮಕ್ಕಳೊಂದಿಗೆ ಬೆಂಗಳೂರಿನಲ್ಲಿಯೇ ವಾಸವಿದ್ದರು.