ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಭಾಗವಹಿಸುವ ಕೊನೆಯ ವಿಧಾನಮಂಡಲದ ಅಧಿವೇಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಗುರುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿದ್ದು, ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ, ಹಟಮಾರಿ. ಮುಖ್ಯಮಂತ್ರಿ ಸ್ಥಾನದ ಕೊನೆಯ ದಿನಗಳನ್ನು ಅವರು ಎಣಿಸುತ್ತಿದ್ದಾರೆ. ಇದೀಗ ಆ ಸ್ಥಾನವನ್ನು ಕಾಂಗ್ರೆಸ್ ಹರಾಜಿಗೆ ಇಟ್ಟಿದೆ. ಸಿದ್ದರಾಮಯ್ಯ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿಯ ಚಳಿಗಾಲದ ಅಧಿವೇಶನವೇ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಾಗಿದೆ ಎಂದು ಹೇಳಿದರು.