May 28, 2026
Thursday, May 28, 2026
spot_img

ಇದು ಜನರ ದೃಢ ನಿರ್ಧಾರ: ಚುನಾವಣೆ ಫಲಿತಾಂಶದ ಬೆನ್ನಲ್ಲೇ ಆರ್. ಅಶೋಕ್ ಪ್ರತಿಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭಾ ಚುನಾವಣಾ ಫಲಿತಾಂಶಗಳ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಪ್ರತಿಕ್ರಿಯೆಗಳು ಜೋರಾಗಿವೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಹಲವು ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ಮುನ್ನಡೆ ಜನಮನದ ಸ್ಪಷ್ಟ ಸಂದೇಶ ಎಂದು ಅಭಿಪ್ರಾಯಪಟ್ಟರು.

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಪಕ್ಷದ ಪ್ರದರ್ಶನ ಉತ್ಸಾಹ ತುಂಬಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಪ್ರಭಾವ ಮತ್ತಷ್ಟು ಬಲಗೊಂಡಿದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜಕೀಯ ದಿಕ್ಕಿಗೆ ಜನರು ಮತ್ತೊಮ್ಮೆ ಬೆಂಬಲ ಸೂಚಿಸಿರುವುದು ಈ ಫಲಿತಾಂಶಗಳಿಂದ ಗೋಚರಿಸುತ್ತಿದೆ ಎಂದರು.

ಇದನ್ನೂ ಓದಿ:

ಇದೇ ವೇಳೆ, ಕೆಲವು ರಾಜ್ಯಗಳಲ್ಲಿ ಎದುರಾಳಿ ಪಕ್ಷಗಳ ರಾಜಕೀಯ ತಂತ್ರಗಳು ಫಲ ನೀಡಿಲ್ಲ ಎಂದು ಟೀಕಿಸಿದ ಅವರು, ದೇಶದ ಭದ್ರತೆ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಜನರು ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು. ರಾಜ್ಯ ರಾಜಕೀಯದ ಕುರಿತು ಮಾತನಾಡಿದ ಅಶೋಕ್, ಕೆಲ ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಆರೋಪ ಮಾಡಿ, ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !