ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಕಾರಣವೇನು ಎಂಬುವುದು ತಿಳಿದಿದೆ. ಸಿಸೇರಿಯನ್ ವೇಳೆ ನೀಡಿದ್ದ “IV ಗ್ಲೂಕೋಸ್”ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.
ಐವಿ (ಇಂಟ್ರಾವೆನಸ್ ದ್ರಾವಣ) ಕಳಪೆ ಗುಣಮಟ್ಟದಿಂದ ಕೂಡಿದೆ. ಆದರೂ, ಕೂಡ ವೈದ್ಯರು ಸಿಸೇರಿಯನ್ ವೇಳೆ “IV ಗ್ಲುಕೋಸ್” ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. ಹೀಗಾಗಿ, ಇಂಟ್ರಾವೆನಸ್ ದ್ರಾವಣ (IV ಗ್ಲುಕೋಸ್) ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.
ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಣಿಯರಿಗೆ ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ನವೆಂಬರ್ 09 ರಂದು ಹೆರಿಗೆ ಬಳಿಕ ಏಕಾಏಕಿ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆರೋಗ್ಯದಲ್ಲಿನ ಏರುಪೇರಿಂದ ಕಳೆದ 15 ದಿನಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ.