ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.