March 20, 2026
Friday, March 20, 2026
spot_img

ಗೆಳೆಯ ಅಂತ ನಂಬಿಕೆ ಇಟ್ಟದ್ದೇ ತಪ್ಪಾಯ್ತು: ಸ್ನೇಹಿತನ ಅಕೌಂಟ್ ಬಳಸಿ 7 ಕೋಟಿ ರೂ. ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ನೇಹದ ಹೆಸರಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಸುಮಾರು 7 ಕೋಟಿ ರೂಪಾಯಿ ಸೈಬರ್ ವಂಚನೆ ನಡೆಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಎಂಬ ಯುವಕ ಕಳೆದ ಒಂದು ವರ್ಷದಿಂದ ಪರಿಚಯದಲ್ಲಿದ್ದರು. ತನ್ನ ಖಾತೆ ಸ್ಥಗಿತಗೊಂಡಿದೆ ಎಂದು ಹೇಳಿ ಆಯುಷ್, ವಿದ್ಯಾರ್ಥಿಯಿಂದ ಬ್ಯಾಂಕ್ ವಿವರಗಳನ್ನು ಪಡೆದಿದ್ದಾನೆ. ನಂಬಿಕೆಯ ಮೇರೆಗೆ ವಿದ್ಯಾರ್ಥಿ ಪಾಸ್‌ಬುಕ್, ಎಟಿಎಂ ಕಾರ್ಡ್ ಮತ್ತು ಮೊಬೈಲ್ ಸಿಮ್ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಕೆಲ ದಿನಗಳ ನಂತರ ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿ, ಅವನ ಖಾತೆಯ ಮೂಲಕ 7 ಕೋಟಿ ರೂಪಾಯಿ ವರ್ಗಾವಣೆ ಆಗಿರುವ ಮಾಹಿತಿ ನೀಡಿದ್ದಾರೆ. ಇದರಿಂದ ಆತ ಬೆಚ್ಚಿಬಿದ್ದಿದ್ದಾನೆ. ತಕ್ಷಣವೇ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಕುರಿತು ವಿದ್ಯಾರ್ಥಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ನೇಹದ ನೆಪದಲ್ಲಿ ನಡೆದ ಈ ವಂಚನೆ ಪ್ರಕರಣ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !