ಮಾಲ್ದೀವ್ಸ್‌ ಅಧ್ಯಕ್ಷರ ಭಾರತ ಭೇಟಿಗೂ ಮುನ್ನ ರಾಜೀನಾಮೆ ನೀಡಿದ ಈ ಸಚಿವರು!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಅಮಾನತುಗೊಂಡಿದ್ದ ಮಾಲ್ದೀವ್ಸ್‌ ಸರ್ಕಾರದ ಇಬ್ಬರು ಕಿರಿಯ ಸಚಿವರು, ಅಧ್ಯಕ್ಷ ಮೊಹಮ್ಮದ್ ಮಾಯಿಝಿ ಅವರ ಭಾರತ ಭೇಟಿಗೆ ಮುಂಚಿತವಾಗಿ ರಾಜೀನಾಮೆ ನೀಡಿದ್ದಾರೆ.

ಮಲ್ಶಾ ಶರೀಫ್ ಮತ್ತು ಮರಿಯಮ್ ಶಿಯುನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಶೀಘ್ರದಲ್ಲೇ ಅಧ್ಯಕ್ಷ ಮುಯಿಝು ಅವರುದೆಹಲಿಗೆ ಭೇಟಿ ನೀಡಲಿದ್ದಾರೆ ಎಂಬ ಸರ್ಕಾರದ ವಕ್ತಾರರೊಬ್ಬರ ಹೇಳಿಕೆ ಉಲ್ಲೇಖಿಸಿ ಮಂಗಳವಾರ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು.

ಇ‌ದೇ ವರ್ಷ ಜನವರಿಯಲ್ಲಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಅಲ್ಲಿ ಕಳೆದ ಕ್ಷಣಗಳ ವಿಡಿಯೊ ಮತ್ತು ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈ ಭೇಟಿಯ ಕುರಿತಂತೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದ ಮಾಲ್ದೀವ್ಸ್‌ ಸಚಿವರಾದ ಮಲ್ಶಾ ಶರೀಫ್, ಮರಿಯಮ್‌ ಶಿಯುನಾ ಮತ್ತು ಮಹಜೂಮ್ ಮಜೀದ್ ಅವರು ಪ್ರಧಾನಿ ಮೋದಿ ಮತ್ತು ಭಾರತವನ್ನು ಕಟುವಾದ ಶಬ್ದಗಳಿಂದ ಟೀಕಿಸಿದ್ದರು.

ಇದರ ಬೆನ್ನಲ್ಲೇ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿತ್ತು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!