ಈ ಆಟಗಾರನಿಗೆ RCB ಮೇಲೆ ಅದೇನು ದ್ವೇಷ ಕಾಣೆ.. ಪದೇ ಪದೇ ‘ರಾಯಲ್ಸ್’ನ ಕೆಣಕೋದ್ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL​ನ 52ನೇ ಪಂದ್ಯದಲ್ಲಿ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಮತ್ತೊಮ್ಮೆ ಟ್ರೊಲ್ ಆಗಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ, ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಇಲ್ಲಿ ಆರ್​ಸಿಬಿ ತಂಡವನ್ನು ಸಿಎಸ್​ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಗ್ಗು ಬಡಿದಿದೆ. ಆರ್​ಸಿಬಿ ವಿರುದ್ಧ ಸಿಎಸ್​ಕೆ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಆರ್​ಸಿಬಿ, ಸಿಎಸ್​ಕೆ ತಂಡದ ಸಾಂಪ್ರದಾಯಿಕ ಎದುರಾಳಿ ಎಂದು ನಾನಂತು ಭಾವಿಸುವುದಿಲ್ಲ. ನೀವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದರಲ್ಲಿ ಅರ್ಥವಿದೆ. ಆದರೆ ಸಿಎಸ್​ಕೆ ಮುಂದೆ ಆರ್​ಸಿಬಿ ಸಾಮಾನ್ಯ ತಂಡ ಎಂದು ಅಂಬಾಟಿ ರಾಯುಡು ಮತ್ತೊಮ್ಮೆ ಆರ್​ಸಿಬಿ ವಿರುದ್ಧ ತಮ್ಮ ಹಳೆಯ ಚಾಳಿಯನ್ನೇ ಮುಂದುವರೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!