ಈ ಆಟಗಾರ ಭಾರತ ತಂಡದ ನಾಯಕನಾದ್ರೆ ಬೆಸ್ಟ್: ಅನಿಲ್ ಕುಂಬ್ಳೆ ಸೂಚಿಸಿದ ಹೆಸರು ಯಾರದ್ದು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ತಂಡವನ್ನು ಯಾರು ಮುನ್ನಡೆಸುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ.

ಈ ಕುರಿತು ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಮಾಜಿ ಕೋಚ್ ಅನಿಲ್ ಕುಂಬ್ಳೆ ತಮ್ಮಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ವೇಗಿ ಜಸ್ಪ್ರೀತ್ ಬುಮ್ರಾ ಮುನ್ನಡೆಸಿದರೆ ಉತ್ತಮ ಎನ್ನುವ ಮೂಲಕ ಬುಮ್ರಾ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ.

ಕಳೆದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಂ ಇಂಡಿಯಾ ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಮಾತ್ರ ಗೆದ್ದಿತ್ತು. ಆ ಪಂದ್ಯವನ್ನು ಬುಮ್ರಾ ಮುನ್ನಡೆಸಿದ್ದರು. ಹಾಗಾಗಿ ಮುಂದಿನ ನಾಯಕನನ್ನಾಗಿ ಈ ವೇಗದ ಬೌಲರ್‌ರನ್ನು ಪರಿಗಣಿಸುವುದು ಉತ್ತಮ ಎಂದಿದ್ದಾರೆ. ಹಾಗೂ ಶುಭ್‌ಮನ್ ಗಿಲ್ ಅವರನ್ನು ಉಪನಾಯಕನಾಗಿ ನೇಮಿಸುವುದು ಉತ್ತಮ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

ಇನ್ನು ಭಾರತಕ್ಕೆ ಹೊಸ ನಾಯಕನ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭ್ಮನ್ ಗಿಲ್ ಮತ್ತು ರಿಷಭ್ ಪಂತ್ ಕೂಡ ಸೇರಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!