ಈ ಪಾತ್ರ ಹೊಸ ಉತ್ಸಾಹ ತರುತ್ತಿದೆ: ಟಿ20 ಗೆ ಸಾರಥಿಯಾದ ಖುಷಿಯಲ್ಲಿ ಸೂರ್ಯಕುಮಾರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಚುಟುಕು ಮಾದರಿಗೆ ಬ್ಯಾಟ್ಸ್​ಮನ್​ ಸೂರ್ಯಕುಮಾರ್​ರನ್ನು ನಾಯಕನನ್ನಾಗಿ ನೇಮಿಸಲಾಗಿದೆ.

ಟಿ20 ಮಾದರಿಗೆ ನಾಯಕನಾಗಿ ಆಯ್ಕೆಯಾದ ಕುರಿತು ಸೂರ್ಯಕುಮಾರ್​ ಯಾದವ್​ ಹರ್ಷ ವ್ಯಕ್ತಪಡಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅವರ ಪೋಸ್ಟ್​ಗೆ ಬಹುತೇಕರು ಶುಭ ಹಾರೈಸಿದ್ದಾರೆ.

ನನ್ನ ಮೇಲೆ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮ ಪ್ರೀತಿ, ಬೆಂಬಲ ಮತ್ತು ಶುಭ ಹಾರೈಕೆಗಳಿಗೆ ತುಂಬಾ ಧನ್ಯವಾದಗಳು. ಕಳೆದ ಕೆಲವು ವಾರಗಳು ಕನಸಿಗಿಂತ ಕಡಿಮೆಯಿಲ್ಲ. ಇದೆಲ್ಲದಕ್ಕಾಗಿ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ. ದೇಶಕ್ಕಾಗಿ ಆಡುವುದು ಅತ್ಯಂತ ವಿಶೇಷವಾದ ಭಾವನೆಯಾಗಿದ್ದು ಅದನ್ನು ಪದಗಳಲ್ಲಿ ವ್ಯಕ್ತಪಡಿಸಲು ಕಷ್ಟ. ಈ ಹೊಸ ಪಾತ್ರವು ಬಹಳಷ್ಟು ಜವಾಬ್ದಾರಿ ಮತ್ತು ಉತ್ಸಾಹವನ್ನು ತರುತ್ತದೆ. ಮುಂದೆಯೂ ನಾನು ನಿಮ್ಮ ಬೆಂಬಲ ಮತ್ತು ಆಶೀರ್ವಾದವನ್ನು ಪಡೆಯುತ್ತೇನೆ ಎಂದು ಭಾವಿಸುತ್ತೇನೆ’ ಎಂದು ಸೂರ್ಯಕುಮಾರ್ ಯಾದವ್ ಬರೆದುಕೊoಡಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!