ಈ ಬಾರಿಯೂ ದೇಶ ಕಾಯೋ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್ಲೆಡೆ ದೀಪಾವಳಿ ಹಬ್ಬ ಸಂಭ್ರಮಿಸಲು ಸಜ್ಜಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ದೀಪಾವಳಿ ಹಬ್ಬ ಆಚರಿಸಲು ಸಜ್ಜಾಗಿದ್ದಾರೆ.
ಈ ಬಾರಿಯೂ ದೇಶದ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಲಿದ್ದಾರೆ.
ಕಳೆದ 8 ವರ್ಷದಿಂದ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನು ದೇಶದ ಗಡಿಯಲ್ಲಿರುವ ಯೋಧರ ಜೊತೆ ಆಚರಿಸಿದ್ದಾರೆ. ಗಡಿಗೆ ತೆರಳಿ ಸಿಹಿ ಹಂಚಿ, ದೀಪಾವಳಿ ಶುಭಾಶಯ ವಿನಿಮಯ ಮಾಡಿಕೊಳ್ಳಲಿದ್ದಾರೆ.
ಆದರೆ ಪ್ರಧಾನಿ ಮೋದಿಯವರು ಯಾವ ಗಡಿ ಪ್ರದೇಶಕ್ಕೆ ತೆರಳಲಿದ್ದಾರೆ ಅನ್ನೋದು ಮಾತ್ರ ಬಹಿರಂಗವಾಗಿಲ್ಲ. ಈ ಬಾರಿ ಮೋದಿ ದೀಪಾವಳಿ ಹಬ್ಬ ಆಚರಣೆಗೂ ಮುನ್ನ ಪವಿತ್ರ ಕೇದಾರನಾಥ ಹಾಗೂ ಬದ್ರಿನಾಥಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ಟೋಬರ್ 21 ರಂದು ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಲಿದ್ದಾರೆ. ಕೇದಾರನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಮೋದಿ ಬಳಿಕ ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!