ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮೋದಿ ಅಲೆ ಇಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರೆಂಟಿಯಿಂದ ಹೇಳಿದ್ದಾರೆ.
ಬಿಜೆಪಿ ಶಕ್ತಿಶಾಲಿಯಾಗಿದ್ದಿದ್ದರೆ ಜೆಡಿಎಸ್ ಜೊತೆ ಮೈತ್ರಿ ಯಾಕೆ ಬೇಕಿತ್ತು? ಈ ಬಾರಿಯ ಚುನಾವಣಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದೂ ಖಚಿತವಿಲ್ಲ ಹಾಗಾಗಿ ಮೈತ್ರಿ ಮೊರೆ ಹೋಗಿದ್ದಾರೆ.
ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಕುರಿತು ಮಾತನಾಡಿ, ಪ್ರಧಾನಿ ಅಭ್ಯರ್ಥಿ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಒಬ್ಬ ವ್ಯಕ್ತಿಯನ್ನು ನಾಯಕನನ್ನಾಗಿ ಗುರುತಿಸುವ, ಮೇಲಕ್ಕೆತ್ತುವ ಬದಲು, ಸವಾಲುಗಳನ್ನು ಒಟ್ಟಿಗೆ ಎದುರಿಸುತ್ತೇವೆ. ವಿಧಾನಸಭೆಯಷ್ಟೇ ಅಲ್ಲ, ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿದರು.