Tuesday, March 28, 2023

Latest Posts

ಈ ಬಾರಿ ನನ್ನ ಕೊನೆಯ ಚುನಾವಣೆ: ಹೆಚ್‌ಡಿ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ರಾಮನಗರದ ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ (Bamul Utsav) ಮಾತನಾಡಿದ ಅವರು, ಮಂಡ್ಯದ ಕಾರ್ಯಕರ್ತರು ಕೆ.ಆರ್.ಪೇಟೆಯಲ್ಲಿ ಬಂದು ಚುನಾವಣೆಗೆ ನಿಲ್ಲಿ ಎಂದು ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ನಿಮ್ಮನ್ನು ಸೋಲಿಸಲು ಮಸಲತ್ತು ಮಾಡಿದ್ದಾರೆ ಎಂದರು. ಆದರೆ ನಾನು ಇದಕ್ಕೆ ಹೆದರುವುದಿಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರದ ಜನರು ಯಾವತ್ತೂ ನನ್ನನ್ನು ಕೈಬಿಡಲಿಲ್ಲ. ನಾನು ಬೇರೆಯವರ ರೀತಿ ಕ್ಷೇತ್ರ ಬದಲಾಯಿಸೋಕೆ ಟೂರಿಂಗ್ ಟಾಕೀಸ್ ಅಲ್ಲ. ಚನ್ನಪಟ್ಟಣ ಬಿಟ್ಟು ನಾನು ಎಲ್ಲೂ ಹೋಗುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಒಗ್ಗಟ್ಟಾಗಿ. ನಿಮ್ಮಲ್ಲೊಬ್ಬ ಲೀಡರ್ ಹುಟ್ಟಿಕೊಳ್ಳಬೇಕು. 2028ಕ್ಕೆ ಓರ್ವ ಅಭ್ಯರ್ಥಿಯನ್ನು ನೀವೇ ತಯಾರಿಸಿ ಎಂದು ಎಂದರು.
ನಾನು ರಾಮನಗರದಲ್ಲೂ (Ramanagara) ಒಬ್ಬನನ್ನು ಬೆಳೆಸಿದ್ದೆ. ಆದರೆ ಅವರು ಬೆನ್ನಿಗೆ ಚೂರಿ ಹಾಕಿದರು ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!