ಈ ಬಾರಿ 11 ದಿನಗಳ ಕಾಲ ಮೈಸೂರು ದಸರಾ ಸಡಗರ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ.

ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಈ ಬಾರಿಯೂ 21 ದಿನಗಳ ಕಾಲ ದೀಪ ಅಲಂಕಾರ ಇರಲಿದೆ. ಈ ಬಾರಿ ಅಂದಾಜು 10 ಲಕ್ಷ ಜನ ದಸರಾದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ದಸರಾ ಕೊನೆಯ ದಿನ ಅಕ್ಟೋಬರ್ 2 ಗಾಂಧಿ ಜಯಂತಿ, ಹೀಗಾಗಿ ಟ್ಯಾಬ್ಲೋದಲ್ಲಿ ಗಾಂಧಿ ಜಯಂತಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!