ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ನ ಕ್ರಿಕೆಟ್ ಪಂದ್ಯಾವಳಿಗೆ ಕೇವಲ ಒಂದು ದಿನ ಉಳಿದಿದೆ. ಶುಕ್ರವಾರ (ಮಾರ್ಚ್ 22) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಪಂದ್ಯದೊಂದಿಗೆ ಐಪಿಎಲ್ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಆರಂಭಿಕ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಎಬಿ ಡಿವಿಲಿಯರ್ಸ್ ಈ ಬಾರಿಯ ಐಪಿಎಲ್ ಟ್ರೋಫಿಯನ್ನು ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ಮಾತನಾಡಿದ್ದಾರೆ.
ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರುನಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದ್ದು, ಎಬಿಡಿ ಪ್ರಕಾರ ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಸೀಸನ್ 17 ರಲ್ಲಿ ಮೊದಲ ಟ್ರೋಫಿಯನ್ನು ಗೆಲ್ಲಬಹುದು? ಎಂದು ಹೇಳಿದ್ದಾರೆ. ಹಾಗಿದ್ರೆ ವಿರಾಟ್ ಕೊಹ್ಲಿ ಅವರ ಕನಸು ನನಸಾಗುವುದೇ ಎಂಬುದನ್ನು ಅಭಿಮಾನಿಗಳು ಕಾದು ನೋಡಬೇಕಿದೆ.