ರಾಜ್ಯದ ಯಾವುದೇ ಭಾಗಕ್ಕೆ ಹೋದರೂ ಕೇಳುತ್ತೆ ಈ ಬಾರಿ ಬಿಜೆಪಿ ಸರ್ಕಾರ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನ ರೋಡ್ ಶೋ ಮುಗಿಸಿ ಪ್ರಧಾನಿ ಮೋದಿ ಬಾದಾಮಿಗೆ ಆಗಮಿಸಿದ್ದು, ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಮೋದಿ, ರಾಜ್ಯದ ಯಾವುದೇ ಭಾಗಕ್ಕೆ ಹೋದರೂ ಒಂದೇ ದ್ವನಿ ಕೇಳಿಬರುತ್ತಿದೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಜನತಾ ಜನಾರ್ಧನನ ದರ್ಶನ ಪಡೆದು ಆಗಮಿಸಿದ್ದೇನೆ.ಕರ್ನಾಟಕದ ಜನರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ ಎಂದರು.

ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂಬರ್ 1 ಮಾಡುವ ಗುರಿಯಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬಹುಮತಗಳಿಂದ ಅಯ್ಕೆ ಮಾಡಿ ಎಂದು ಕರೆ ನೀಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ನ ಭ್ರಷ್ಟಾಚಾರದ ಹಾದಿ ಬಂದ್ ಮಾಡಿದ್ದೇವೆ. ಕಾಂಗ್ರೆಸ್ ನ ಭ್ರಷ್ಟಾಚಾರಕ್ಕೆ ತ್ರಿಶೂಲಾಸ್ತ್ರ ಪ್ರಯೋಗ ಮಾಡಿದ್ದೇವೆ. ಹೀಗಾಗಿ ಕಾಂಗ್ರೆಸ್ ನವರು ನನ್ನನ್ನು ಬೈಯ್ಯುತ್ತಿದ್ದಾರೆ. ಕಾಂಗ್ರೆಸ್ ನಾಯಕ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳುತ್ತಿದ್ದರು. ದೆಹಲಿಯಿಂದ 1 ರೂಪಾಯಿ ಬಿಡುಗಡೆಯಾದರೆ ಜನರಿಗೆ 15 ಪೈಸೆ ತಲುಪುತ್ತೆ ಎಂದು. ರಾಜೀವ್ ಗಾಂಧಿ ಹೇಳಿಕೆಯಂತೆ ಕಾಂಗ್ರೆಸ್ ನವರು 85% ಪಡೆಯುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದಿರಿ. ಆದರೆ ಸಿದ್ದರಾಮಯ್ಯ ಗೆಲ್ಲಿಸಿದ ಜನರನ್ನು ತಿರಸ್ಕರಿಸಿ ಓಡಿ ಹೋಗಿದ್ದಾರೆ. ಬಾದಾಮಿಯಲ್ಲಿ ಯಾವುದೇ ಅಭಿವೃದ್ಧಿಯನ್ನೂ ಮಾಡಿಲ್ಲ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!