ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಈ ಹಿಂದೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಗಣರಾಜ್ಯೋತ್ಸವಕ್ಕೆ ಆಹ್ವಾನಿಸಲಾಗಿದೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಜನವರಿ ೨೬ರವೇಳೆ ಬಿಡೆನ್ ಅನ್ಯಕೆಲಸಗಳ ಶೆಡ್ಯೂಲ್‌ನಲ್ಲಿ ನಿರತರಾಗಿರುವ ಕಾರಣ ಅವರು ಭಾರತಕ್ಕೆ ಬರಲು ಆಗುವುದಿಲ್ಲ ಎನ್ನಲಾಗಿದೆ.
ಇದೀಗ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರಿಗೆ ಆಹ್ವಾನ ಕಳುಹಿಸಲಾಗಿದೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.