ಈ ಬಾರಿ ಕಪ್ ಇವರದ್ದೇ! ಆರ್‌ಸಿಬಿ ಕ್ಯಾಪ್ಟನ್ ಭವಿಷ್ಯವಾಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಫೈನಲ್ ಪಂದ್ಯ ಇನ್ನೇನು ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ. ಈ ಬಾರಿ ಸಿಎಸ್‌ಕೆ ಹಾಗೂ ಜಿಟಿ ತಂಡಗಳು ಮುಖಾಮುಖಿಯಾಗಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.

ಈವರೆಗೂ ಇವರೆಡೂ ತಂಡಗಳು ನಾಲ್ಕು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್ ಟೈಟನ್ಸ್ ಮೂರು ಬಾರಿ ಗೆದ್ದಿದೆ. ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮಾತನಾಡಿದ್ದು, ಈ ಬಾರಿ ಯಾವ ಪಂದ್ಯ ಗೆಲ್ಲಲಿದೆ ಎಂದು ಭವಿಷ್ಯವಾಣಿ ನುಡಿದಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವುದು ಸುಲಭ ಇಲ್ಲ, ಆದರೆ ಈ ಬಾರಿ ಹಾರ್ದಿಕ್ ಪಾಂಡ್ಯ ಪಡೆಗೆ ಸಿಎಸ್‌ಕೆ ಸೋಲಿಸಿ ಗೆಲ್ಲುವ ಸಾಧ್ಯತೆ ಇದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!