ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿ ನೀರಾವರಿ ಯೋಜನೆಗೆ ಸರ್ಕಾರ ಒತ್ತು ನೀಡಿದೆ. ಏನೆಲ್ಲಾ ಸಿಕ್ಕಿದೆ ನೋಡಿ..
- ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ.
- ಕಳಸಾ – ಬಂಡೂರಾ ನಾಲಾ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭ.
- ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ.
- ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ.
- 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿ ಅನುಷ್ಟಾನಗೊಳಿಸಲು ಕ್ರಮ.
- ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ.
- ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆ ಅನುಷ್ಠಾನ.
- ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಜಾರಿ.
- ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮ.
- ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಿಗೆ 2 ಸಾವಿರ ಕೋಟಿ ರೂ.
- ಸಣ್ಣ ನೀರಾವರಿ: ಎತ್ತಿನಹೊಳೆ ಯೋಜನೆಯಿಂದ ಮಧುಗಿರಿ ತಾಲೂಕಿನ 45 ಕೆರೆಗಳು, ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸಲು 553 ಕೋಟಿ ರೂ. ಅನುಷ್ಠಾನಗೊಳಿಸಲು ಕ್ರಮ.
- 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ.