ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಬಿಬಿಎಂಪಿ ಸಭೆ ನಡೆಸಿದ್ದು, ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಿದ್ದಾರೆ.
ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಗಣೇಶನ ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೇ ನಿರ್ಬಂಧವಿಲ್ಲ. 24 ಗಂಟೆಯೊಳಗೆ ಅನುಮತಿ ಕೊಡಲು ಆಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.