ಈ ಬಾರಿ ‘ವೀಕೆಂಡ್ ವಿತ್ ರಮೇಶ್‘ ರಿಯಾಲಿಟಿ ಶೋಗೆ ಬರ್ತಾರೆ ಈ ಅತಿಥಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಿರುತೆರೆ ಮೂಲಕ ಜನಪ್ರಿಯವಾದ ರಿಯಾಲಿಟಿ ಶೋಗಳಲ್ಲಿ (Reality Show) ಒಂದಾಗಿದ ‘ವೀಕೆಂಡ್ ವಿತ್ ರಮೇಶ್‘ (Weekend With Ramesh) ಹೊಸ ಸೀಸನ್ ಪ್ರಾರಂಭವಾಗಲಿದೆ.

ಶೋನ ಪ್ರೋಮೋಗಳು ಈಗಾಗಲೇ ಬಿಡುಗಡೆ ಆಗಿದ್ದು, ಮಾರ್ಚ್ 25 ರಂದು ಮೊದಲ ಸಂಚಿಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಮೊದಲ ಎಪಿಸೋಡ್​ನ ಅತಿಥಿ ಯಾರಾಗಲಿದ್ದಾರೆ ಎಂಬುದರ ಜೊತೆಗೆ ಈ ಸೀಸನ್​ನಲ್ಲಿ ಕಾಣಿಸಿಕೊಳ್ಳುವ ಇತರೆ ಕೆಲವು ಅತಿಥಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.
ಮೊದಲ ಎಪಿಸೋಡ್​ಗೆ ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ರಮ್ಯಾ ಜೊತೆಗಿನ ಎಪಿಸೋಡ್​ನ ಚಿತ್ರೀಕರಣ ಮಾರ್ಚ್ 21 ರಿಂದ ಪ್ರಾರಂಭವಾಗಲಿದೆ ಎಂದು ನಿರೂಪಕ ರಮೇಶ್ ಅರವಿಂದ್ ಹಾಗೂ ಜೀ ವಾಹಿನಿಯ ಚೀಫ್ ಕಂಟೆಂಟ್ ಆಫೀಸರ್ ರಾಘವೇಂದ್ರ ಹುಣಸೂರು ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎರಡನೇ ಎಪಿಸೋಡ್ ನಲ್ಲಿ ಡ್ಯಾನ್ಸ್ ಲಿಜೆಂಡ್ ಪ್ರಭುದೇವ ಸಾಧಕರ ಕುರ್ಚಿಯ ಮೇಲೆ ಕೂರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸೀಸನ್​ನಲ್ಲಿ ನಟ ಧ್ರುವ ಸರ್ಜಾ, ನಟಿ ರಚಿತಾ ರಾಮ್, ನಟಿ ಮಾಲಾಶ್ರೀ, ಇಶಾ ಫೌಂಡೇಶನ್​ನ ಜಗ್ಗಿ ವಾಸುದೇವ್ , ಖ್ಯಾತ ಹೃದ್ರೋಗ ತಜ್ಞ ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷವೆಂದರೆ ಇನ್ನು 16 ಸಾಧಕರ ಬಳಿಕ ನೂರನೇ ಸಾಧಕರು ಬರಲಿದ್ದು, ಆ ಎಪಿಸೋಡ್​ಗೆ ಬಹಳ ವಿಶೇಷ ಅತಿಥಿಯೊಬ್ಬರು ಸಾಧಕರ ಕುರ್ಚಿ ಏರಲಿದ್ದಾರೆ. ನೂರನೇ ಎಪಿಸೋಡ್​ಗೆ ಬರುವ ಅತಿಥಿ ಆ ಚೇರ್​ಗೆ ನ್ಯಾಯ ಕೊಡಲಿದ್ದಾರೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!