Thursday, August 11, 2022

Latest Posts

ಈ ಬಾರಿಯೂ ಸರಳ ದಸರಾ: ಅಪ್ಪಚ್ಚುರಂಜನ್ ಇಂಗಿತ

ಹೊಸದಿಗಂತ ವರದಿ, ಮಡಿಕೇರಿ:

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಸಹ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಕೋವಿಡ್-19 ಹಿನ್ನೆಲೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕಿದೆ. ಆರೋಗ್ಯವೇ ಮುಖ್ಯ. ಆ ನಿಟ್ಟಿನಲ್ಲಿ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು.
ಕಳೆದ ಎರಡು ವರ್ಷದಿಂದ ಕೊರೋನಾದಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು, ಈಗ ಚೇತರಿಸಿಕೊಳ್ಳುತ್ತಿದ್ದು, ಸುಧಾರಣೆಯತ್ತ ಸಾಗುತ್ತಿದೆ. ಇನ್ನು ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಕಡಿಮೆಯಾಗಬಹುದು ಎಂದು ಶಾಸಕರು ನುಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss