ಈ ಬಾರಿ ವಿ.ಸೋಮಣ್ಣ ಗೆದ್ದು ದೆಹಲಿಗೆ ಹೋಗಬೇಕಿದೆ, ಜನರಲ್ಲಿ ದೇವೇಗೌಡರು ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಾರ್ಲಿಮೆಂಟ್‌ಗೆ ಕಳಿಸಿಕೊಡುವ ಶಕ್ತಿ ನನಗಿನ್ನೂ ಇದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಯಾರು ಪ್ರಧಾನಿಯಾಗಲು ಅರ್ಹರು ಎಂದು ದಯವಿಟ್ಟು ಹೇಳಿ. ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋಮಣ್ಣ ಅವರನ್ನು ಗೆಲ್ಲಿಸಿದರೆ ಅನಿಮ್ಮ ದೇವೇಗೌಡರೇ ಗೆದ್ದಂತೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಸೋಮವಾರ ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಜಾತ್ಯತೀತ ಜನತಾ ದಳದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾವೇರಿ ವಿಚಾರವಾಗಿ ಪ್ರಧಾನಿ ಮೋದಿಯವರನ್ನ ನಾನು ನಂಬುತ್ತೇನೆ. 1962ರಿಂದಲೂ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಿದ್ದೇನೆ, ವಿ.ಸೋಮಣ್ಣ ಗೆದ್ದರೆ ಕಾವೇರಿ ನೀರು, ಮೇಕೆದಾಟು ಜಾರಿ ಕುರಿತು ನರೇಂದ್ರ ಮೋದಿಯವರನ್ನು ತಲೆ ಎತ್ತಿ ಕೇಳುತ್ತೇನೆ.

ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥವಾಗಿದೆ. 2019ರ ಸೋಲಿನಿಂದ ನಿರಾಸೆಯಿಲ್ಲದಿದ್ದರೂ ವಿ.ಸೋಮಣ್ಣ ಈ ಬಾರಿ ಗೆದ್ದು ದಿಲ್ಲಿಗೆ ಹೋಗಬೇಕು ಎಂಬ ಮನವಿ ಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!