ನಗರವಾಸಿಗಳಿಗೆ ಈ ಊರು ಮಾದರಿ: ಇಲ್ಲಿ 100% ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಎಂಬಂತೆ ಶೇ.100 ಮತದಾನ ಮಾಡುವ ಮೂಲಕ ನಕ್ಸಲ್ ಕೇಂದ್ರಿತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾಂಜಾರುಮಲೆ ದಾಖಲೆ ‌ನಿರ್ಮಿಸಿದೆ.

ಮತಗಟ್ಟೆ ಸಂಖ್ಯೆ 86 ರ ಸಮುದಾಯ ಭವನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಲ್ಲಿ 51 ಮಹಿಳೆಯರು, 60 ಪುರುಷರು ಸೇರಿ ಒಟ್ಟು 111 ಮತದಾರರಿದ್ದಾರೆ.

ಕಳೆದ ಬಾರಿ 2019 ರಲ್ಲಿ ಇಲ್ಲಿ ಶೇ.99 ಮತದಾನವಾಗಿತ್ತು. ಈ ಬಾರಿ ಜಿಲ್ಲಾ ಸ್ವೀಪ್ ಸಮಿತಿ ಮಾರ್ಗದರ್ಶನದಂತೆ ಬೆಳ್ತಂಗಡಿ ತಾಲೂಕಿನ ಸ್ವೀಟ್ ಸಮಿತಿ ಅಧ್ಯಕ್ಷ ವೈಜಣ್ಣ ಹಾಗೂ ತಂಡ ಶೇ.100 ಮತದಾನ ಮಾಡುವಂತೆ ಊರ ಜನರಲ್ಲಿ ಜಾಗೃತಿ ಮೂಡಿಸಿತ್ತು. ಇದರ ಪರಿಣಾಮ ನೆಟ್ ವರ್ಕ್, ರಸ್ತೆ, ಮೂಲಸೌಕರ್ಯವಿಲ್ಲದ ಪುಟ್ಟ ಉರೊಂದು ಜಿಲ್ಲೆಗೆ ಮಾದರಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!