ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಮಾರ್ಗದಲ್ಲಿ ಕವಚ್ ವ್ಯವಸ್ಥೆ ಇರಲಿಲ್ಲ ಎಂಬ ಆರೋಪ ಸಂಬಂಧಿಸಿ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ ಸದಸ್ಯೆ ಜಯ ವರ್ಮ ಸಿನ್ಹಾ ಮಾಹಿತಿ ನೀಡಿದ್ದಾರೆ.
ಸಾಮಾನ್ಯವಾಗಿ ಅಪಘಾತ ನಡೆದ ಮಾರ್ಗದಲ್ಲಿ ಒಂದು ವೇಳೆ ಕವಚ್ (Kavach) ಸಕ್ರಿಯವಾಗಿದ್ದರೂ ಮೂರು ರೈಲು ದುರಂತವನ್ನು (Odisha Train Tragedy) ತಪ್ಪಿಸಲು ಸಾಧ್ಯವಿರಲಿಲ್ಲ ಎಂದು ಜಯ ವರ್ಮ ಸಿನ್ಹಾ ಹೇಳಿದ್ದಾರೆ.
ಒಂದು ರೈಲು ವೇಗವಾಗಿ ಚಲಿಸುವ ವಾಹನದ ಮುಂದೆ ಇದ್ದಕ್ಕಿದ್ದಂತೆ ಅಡಚಣೆ ಸೃಷ್ಟಿಯಾದರೆ ಪ್ರಪಂಚದ ಯಾವುದೇ ತಂತ್ರಜ್ಞಾನವು ಆ ಅಪಘಾತವನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಗೂಡ್ಸ್ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express) ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ ಎಂದು ತಿಳಿಸಿದರು.
ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ (Electronic Interlocking) ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು . ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ಸರಿಯಾದ ತನಿಖೆಯ ನಂತರ ಕಂಡುಹಿಡಿಯಲಾಗುವುದು ಎಂದು ಅಧಿಕಾರಿಗಳು ಹೇಳಿದರು.