ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಈ ಉಪಚುನಾವಣೆ ಗೆಲುವು 2028ರ ಸಾರ್ವತ್ರಿಕ ಚುನಾವಣೆಯ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಸೋತಿದ್ದಾರೆ ಎಂದು ಹೇಳಲ್ಲ. ಕುಮಾರಸ್ವಾಮಿ ವಿರುದ್ಧ ಜನ ತೀರ್ಪು ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಸೋತಿದ್ದಾರೆ ಎಂದು ಹೇಳುವುದಿಲ್ಲ. ಅವರ ತಂದೆ ಬೊಮ್ಮಾಯಿ ಸೋತಿದ್ದಾರೆ ಎಂದು ತಿಳಿಸಿದ್ದಾರೆ.