May 4, 2026
Monday, May 4, 2026
spot_img

ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ: ಸಚಿವ ಶಿವಾನಂದ ಪಾಟೀಲ

ಹೊಸದಿಗಂತ ವರದಿ ವಿಜಯಪುರ:

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಸಿದ ಅವರು, ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು ಸಮಾಜದಲ್ಲಿ ಶಾಂತಿಯನ್ನು ಬಯಸಿ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದ ಉಮೇಶ ಮೇಟಿ ಮತ್ತು ಸಮರ್ಥ ಶಾಮನೂರು ಅವರನ್ನು ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ:

ಚುನಾವಣೆ ಪ್ರಚಾರದ ವೇಳೆ ರಾಜ್ಯ ಸರ್ಕಾರವನ್ನು ಲಘುವಾಗಿ ಟೀಕೆ ಮಾಡಲಾಯಿತು. ಮತ ವಿಭಜನೆಯ ಪ್ರಯತ್ನಗಳೂ ನಡೆದವು. ಆದರೆ ಮತದಾರರು ಅಪಪ್ರಚಾರಗಳಿಗೆ ಮನ್ನಣೆ ನೀಡಲಿಲ್ಲ. ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈ ಬಲಪಡಿಸಿದ್ದಾರೆ‌. ಉಮೇಶ ಮೇಟಿ ಮತ್ತು ಸಮರ್ಥ ಶಾಮನೂರು ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ನೂತನ ಶಾಸಕರು ಕ್ಷೇತ್ರಗಳನ್ನು ಮಾದರಿಯಾಗಿ ಅಭವೃದ್ಧಿಪಡಿಸಲಿ ಎಂದು ಆಶಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !