Thursday, March 23, 2023

Latest Posts

ಈ ವರ್ಷ ದೇಶದ ಸರಕು ಮತ್ತು ಸೇವಾ ರಫ್ತು 750 ಬಿಲಿಯನ್ ಡಾಲರ್‌ಗೆ ತಲುಪಲಿದೆ : ಪಿಯೂಷ್ ಗೋಯಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಸಕ್ತ ವರ್ಷದಲ್ಲಿ ದೇಶದ ಸರಕು ಮತ್ತು ಸೇವಾ ರಫ್ತು 750 ಬಿಲಿಯನ್ ಡಾಲರ್‌ಗೆ ತಲುಪಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಪಿಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದರು.

ನಿನ್ನೆ ನವದೆಹಲಿಯಲ್ಲಿ ನಡೆದ ರೈಸಿನಾ ಸಂವಾದದಲ್ಲಿ ಮಾತನಾಡಿದ ಸಚಿವರು, ಸುಸ್ಥಿರತೆ ಮತ್ತು ಗುಣಮಟ್ಟದ ಮೇಲೆ ಗಮನ ಕೇಂದ್ರೀಕರಿಸುವುದು ಮುಂದಿನ ದಿನಗಳಲ್ಲಿ ಭಾರತವನ್ನು ಉತ್ತಮ ಸ್ಥಿತಿಯಲ್ಲಿಡುತ್ತದೆ ಎಂದು ಒತ್ತಿ ಹೇಳಿದರು.

ಗುಣಮಟ್ಟದ ಸರಕು ಮತ್ತು ಸೇವಾ ರಫ್ತು ಮಾಡುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಎತ್ತಿ ಹಿಡಿದ ಅವರು, ಗುಣಮಟ್ಟ ನಿಯಂತ್ರಣ ಆದೇಶಗಳ ಸಂಖ್ಯೆಯು ನಾಲ್ಕು ಪಟ್ಟು ಹೆಚ್ಚಾಗಿದೆ ಮತ್ತು ಈಗ ಸುಮಾರು 440 ಉತ್ಪನ್ನಗಳಿಗೆ ಬಂದು ನಿಂತಿದೆ ಎಂದು ತಿಳಿಸಿದರು.

ಮುಂದಿನ ಎರಡು ವರ್ಷಗಳಲ್ಲಿ ಇದು 2000 ಕ್ಕೆ ಬೆಳೆಯುತ್ತದೆ ಮತ್ತು ದೇಶವು ತನ್ನ ಶೂನ್ಯ ದೋಷ, ಶೂನ್ಯ ಪರಿಣಾಮದ ಆಶಯವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ದೇಶದ ವ್ಯಾಪಾರ ಪರಿಸರ ವ್ಯವಸ್ಥೆಯು ಸ್ಥಿರ ಮತ್ತು ಹೂಡಿಕೆದಾರರಿಗೆ ಸ್ನೇಹಿಯಾಗಿದೆ ಎಂದು ಶ್ಲಾಘಿಸಿದ ಸಚಿವರು, ಸೆಮಿಕಂಡಕ್ಟರ್ ಸರಣಿಯಲ್ಲಿ ಹೂಡಿಕೆ ಮಾಡಲು ಹಲವು ಕಂಪನಿಗಳು ಭಾರತದೊಂದಿಗೆ ಮಾತುಕತೆ ನಡೆಸುತ್ತಿವೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!