ಚೊಚ್ಚಲ ಥಾಮಸ್ ಕಪ್ ಎತ್ತಿಹಿಡಿದ ಭಾರತ: ಇಂಡೋನೇಷ್ಯಾ ವಿರುದ್ಧ ಐತಿಹಾಸಿಕ ಗೆಲುವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ಪುರುಷರ ಬ್ಯಾಡ್ಮಿಂಟನ್​ ತಂಡವು ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ವಿರುದ್ಧ 3-0 ಅಂತರದಿಂದ ಮೇಲುಗೈ ಸಾಧಿಸಿ ಚೊಚ್ಚಲ ಥಾಮಸ್ ಕಪ್ ಎತ್ತಿಹಿಡಿದು ಹೊಸ ಇತಿಹಾಸ ಬರೆದಿದೆ.

ವಿಶ್ವ ಚಾಂಪಿಯನ್‌ಶಿಪ್‌ ಪದಕ ವಿಜೇತ ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್ ಮತ್ತು ವಿಶ್ವದ 8 ನೇ ಶ್ರೇಯಾಂಕದ ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಸ್ಮರಣೀಯ ಪ್ರದರ್ಶನದ ಮೂಲಕ ಭಾರತವು ಶ್ರೇಷ್ಠ ಸಾಧನೆಗೆ ಪಾತ್ರವಾಗಿದೆ.

ನಾಕೌಟ್ ಹಂತಗಳ ಬಳಿಕ ಸೇನ್ ಅವರು ಭಾರತಕ್ಕೆ 1-0 ಮುನ್ನಡೆ ತಂದುಕೊಟ್ಟರು. ವಿಶ್ವದ ಐದನೇ ಶ್ರೇಯಾಂಕದ ಆಂಥೋನಿ ಸಿನಿಸುಕಾ ಗಿಂಟಿಂಗ್ ವಿರುದ್ಧ 8-21, 21-17, 21-16 ಅಂತರದಲ್ಲಿ ಜಯಗಳಿಸಿದರು.

ದೇಶದ ಅತ್ಯುತ್ತಮ ಡಬಲ್ಸ್ ಜೋಡಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಎರಡನೇ ಗೇಮ್‌ನಲ್ಲಿ ನಾಲ್ಕು ಮ್ಯಾಚ್ ಪಾಯಿಂಟ್‌ಗಳನ್ನು ಉಳಿಸಿಕೊಂಡಿತಲ್ಲದೆ, ಅದ್ಭುತ ಪ್ರದರ್ಶನ ನೀಡಿದರು. ಶ್ರೀಕಾಂತ್ ನಂತರ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಜೊನಾಟನ್ ಕ್ರಿಸ್ಟಿಯನ್ನು 48 ನಿಮಿಷಗಳಲ್ಲಿ 21-15, 23-21ರಿಂದ ಸೋಲಿಸಿ ಸ್ಪರ್ಧೆಗೆ ಅಂತ್ಯ ಹಾಡಿದರು.

ಫ್ರಧಾನಿ ಶ್ಲಾಘನೆ:
ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ‘ಭಾರತದ ಬ್ಯಾಡ್ಮಿಂಟನ್ ತಂಡ ಇತಿಹಾಸ ಬರೆದಿದೆ! ಥಾಮಸ್ ಕಪ್ ಗೆದ್ದ ಭಾರತದ ಗೆಲುವಿಗೆ ಇಡೀ ದೇಶವೇ ಸಂಭ್ರಮದಲ್ಲಿದೆ! ನಮ್ಮ ನಿಪುಣ ತಂಡಕ್ಕೆ ಅಭಿನಂದನೆಗಳು ಮತ್ತು ಭವಿಷ್ಯದ ಟೂರ್ನಿಗಳಿಗೆ ಶುಭವಾಗಲಿ. ಈ ಗೆಲುವು ಹಲವು ಕ್ರೀಡಾಪಟುಗಳಿಗೆ ಪ್ರೇರಣೆ ನೀಡಲಿದೆ’ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!