ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಎಂದಿಗೂ ಜನರ ಸಮಸ್ಯೆಗಳ ಮಾತನಾಡುವುದು ಕಡಿಮೆ. ಜನರಿಂದ ತಿರಸ್ಕೃತಗೊಂಡಿರುವ ಕೆಲವರು ಬೆರಳೆಣಿಕೆಯಷ್ಟು ಜನರಿಂದ ಗೂಂಡಾಗಿರಿ ಮಾಡುವ ಮೂಲಕ ಸಂಸತ್ತನ್ನು ನಿಯಂತ್ರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ದೇಶದ ಜನರು ಅವರ ಈ ಎಲ್ಲಾ ಪ್ರಯತ್ನಗಳನ್ನು ಗಮನಿಸುತ್ತಿದ್ದಾರೆ. ಕೇವಲ ಅಧಿಕಾರದ ದಾಹ ಇರುವವರನ್ನು ಜನರು ತಿರಸ್ಕರಿಸಿದ್ದಾರೆ.

ಅತ್ಯಂತ ನೋವಿನ ಸಂಗತಿಯೆಂದರೆ, ಹೊಸ ಸಂಸದರು ಹೊಸ ಆಲೋಚನೆಗಳನ್ನು, ಹೊಸ ಶಕ್ತಿಯನ್ನು ತರುತ್ತಾರೆ. ಅವರು ಯಾವುದೇ ಒಂದು ಪಕ್ಷಕ್ಕೆ ಸೇರಿದವರಲ್ಲ. ಎಲ್ಲಾ ಪಕ್ಷಗಳಿಗೆ ಸೇರಿದವರು. ಆದರೆ, ಕೆಲವರು ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಅವರಿಗೆ ಸದನದಲ್ಲಿ ಮಾತನಾಡುವ ಅವಕಾಶ ನೀಡುತ್ತಿಲ್ಲ. 80-90 ಬಾರಿ ಜನರಿಂದ ನಿರಂತರವಾಗಿ ತಿರಸ್ಕರಿಸಲ್ಪಟ್ಟವರು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವದ ಮನೋಭಾವವನ್ನು ಗೌರವಿಸುತ್ತಿಲ್ಲ. ಜನರ ಆಶೋತ್ತರಗಳ ಮಹತ್ವವನ್ನು ಅರ್ಥಮಾಡಿಕೊಳ್ಳುತ್ತಿಲ್ಲ. ಅವರಿಗೆ ಜನರ ಬಗ್ಗೆ ಯಾವುದೇ ಜವಾಬ್ದಾರಿ ಇಲ್ಲ, ಎಂದಿಗೂ ಜನರ ನಿರೀಕ್ಷೆಗಳಿಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!