ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಕಣಿವೆಯ ಮೇಲ್ಭಾಗದ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಾನ ದಾಳಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಸಂಪೂರ್ಣ ಸಾಂತ್ವನವಿದೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಘಟನೆಯ ಕುರಿತು ಗೃಹ ಸಚಿವರಾದ ಅಮಿತ್ ಶಾ ಮತ್ತು ಸಂಬಂಧಿತ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದಾರೆ.