ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕಾರಕ್ಕಾಗಿ ಹೈಕಮಾಂಡ್ ನಾಯಕರ ಬಳಿ ಚಮಚಾಗಿರಿ ಮಾಡುತ್ತಿರುವವರಿಗೆ ಮಂಡ್ಯದ ಜನರ ಬಗ್ಗೆ ಮಾತನಾಡುವ ಯೋಗ್ಯತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಂಡ್ಯ ಎಂದರೆ ಇಂಡಿಯಾ ಎನ್ನುವ ಮಾತಿದೆ. ಮಂಡ್ಯದ ಜನತೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ಮಾತಾಡಿದರೆ ಅಡ್ರೆಸ್ ಇಲ್ಲದಂತಾಗುತ್ತೀರಿ, ಹುಷಾರ್ ಎಂದು ಎಚ್ಚರಿಸಿದ್ದಾರೆ.