ರಾಮ ಕಾಲ್ಪನಿಕ ವ್ಯಕ್ತಿ ಎಂದವರು ‘ಜೈ ಸಿಯಾ ರಾಮ್‌’ ಘೋಷಣೆ ಕೂಗುತ್ತಿದ್ದಾರೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

‘ಭಗವಾನ್ ರಾಮ ಕಾಲ್ಪನಿಕ ವ್ಯಕ್ತಿ ಎಂಬುದಾಗಿ ಕರೆಯುತ್ತಿದ್ದವರು ಹಾಗೂ ಮಂದಿರ ನಿರ್ಮಾಣ ಬಯಸದಿದ್ದವರು ಈಗ ಜೈ ಸಿಯಾ ರಾಮ್‌ ಎಂಬ ಘೋಷಣೆ ಕೂಗುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹರಿಯಾಣದಲ್ಲಿ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಎಐಐಎಂಎಸ್‌) ಶಾಖೆಗೆ ಶಿಲನ್ಯಾಸ ನೆರವೇರಿಸಿ ಹಾಗೂ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ನಂತರ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಪ್ರಧಾನಿ ಅಭ್ಯರ್ಥಿಯಾಗಿ ನಾನು ಕೆಲ ಭರವಸೆಗಳನ್ನು ನೀಡಿದ್ದೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ದೇಶದ ಜನರ ಇಚ್ಛೆಯಾಗಿತ್ತು. ಜನರ ಆಶಯವನ್ನು ಪೂರೈಸಲಾಗಿದೆ’ ಎಂದು ಹೇಳಿದರು.

‘ಜನರ ಆಶೀರ್ವಾದದಿಂದ, ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೀಟುಗಳಿಗೆ ಮಹತ್ವ ಇದೆ. ಆದರೆ, ಜನರ ಆಶೀರ್ವಾದವೇ ನನ್ನ ಪಾಲಿಗೆ ದೊಡ್ಡ ಆಸ್ತಿ’ ಎಂದು ಮೋದಿ ಹೇಳಿದರು.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!