ಮಸೀದಿಗಾಗಿ ಹೋರಾಡಿದವರು ರಾಮನ ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದ್ರೆ ಕಾಂಗ್ರೆಸ್ ​ನಾಯಕರು ಬರಲಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಂದು ಬಾಬ್ರಿ ಮಸೀದಿ ಪರ ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಲ್ಲಿ ಒಬ್ಬರಾದ ಇಕ್ಬಾಲ್ ಅನ್ಸಾರಿ (Iqbal Ansari) ಕುಟುಂಬದ ಎರಡು ತಲೆಮಾರಿನವರು ಬಾಬರಿ ಮಸೀದಿಗಾಗಿ ಹಿಂದುಗಳ ವಿರುದ್ಧ ನ್ಯಾಯಾಲಯದಲ್ಲಿ ಶತಮಾನಗಳ ಕಾಲ ಹೋರಾಟ ನಡೆಸಿದರು.ದರೆ ಸುಪ್ರೀಂ ಕೋರ್ಟ್ ಹಿಂದೂಗಳ ಪರವಾಗಿ ತೀರ್ಪು ನೀಡಿದಾಗ ಅವರು ಸಂತೋಷದಿಂದ ಸ್ವಾಗತಿಸಿದರು. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು ಆದರೆ ಕಾಂಗ್ರೆಸ್​ನ ನಾಯಕರು ಮಾತ್ರ ಆಗಮಿಸಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಶತಮಾನಗಳ ಕಾಲ ಹಿಂದು ಗಳ ವಿರುದ್ಧ ಹೋರಾಟ ಮಾಡಿದ್ದ ಇಕ್ಬಾಲ್ ಅನ್ಸಾರಿ ಮತ್ತು ಅವರ ಕುಟುಂಬಕ್ಕೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ನೀಡಲಾಗಿತ್ತು. ಅಷ್ಟೇ ಅಲ್ಲದೆ ಆಹ್ವಾನ ಸ್ವೀಕರಿಸಿದ್ದ ಇಕ್ಬಾಲ್ ಅನ್ಸಾರಿ ಅವರು ರಾಮಮಂದಿರ ಕಾರ್ಯಕ್ರಮಕ್ಕೆ ಸ್ವತಃ ಹಾಜರಾಗಿದ್ದರು. ಆ ಮೂಲಕ ಅವರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಒಪ್ಪಿಕೊಂಡಿದ್ದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

ಯಾವ ರೀತಿ ಇಕ್ಬಾಲ್ ಅನ್ಸಾರಿ ಅವರಿಗೆ ಆಹ್ವಾನ ನೀಡಲಾಗಿತ್ತು. ಅದೇ ರೀತಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಭಾರತ ಮೈತ್ರಿಕೂಟದ ನಾಯಕರಿಗೂ ರಾಮಮಂದಿರ ಟ್ರಸ್ಟ್‌ನಿಂದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನ ನೀಡಲಾಗಿತ್ತು.

ಆದ್ರೆ ಜೀವನಪರ್ಯಾಂತ ಬಾಬರಿ ಮಸೀದಿಗಾಗಿ ಹೋರಾಡಿದವರೇ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್​ನ ನಾಯಕರು ಮಾತ್ರ ಬರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!