ಪಕ್ಷ ಬಿಟ್ಟು ಹೋದವರನ್ನು ಮತ್ತೆ ಸೇರಿಸಲ್ಲ: ಉದ್ಧವ್ ಠಾಕ್ರೆ ಖಡಕ್ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆ ಬಳಿಕ ಮಹಾ ವಿಕಾಸ್‌ ಅಘಾಡಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಎಂವಿಎ ಮೈತ್ರಿ ಕೂಟ ಬೆಂಬಲಿಸಿದ್ದಕ್ಕಾಗಿ ಮಹಾರಾಷ್ಟ್ರ ಜನತೆಗೆ ಧನ್ಯವಾದ ತಿಳಿಸಿದರು .

ಉದ್ಧವ್ ಠಾಕ್ರೆ ಹಾಗೂ ಶರದ್‌ ಪವಾರ್‌ (ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸುವ ಸುಳಿವು ನೀಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಜಂಟಿಯಾಗಿ ವಾಗ್ದಾಳಿ ನಡೆಸಿದರು.

ಉದ್ಧವ್ ಠಾಕ್ರೆ ಮಾತನಾಡಿ, 2022ರಲ್ಲಿ ತಮ್ಮ ಪಕ್ಷವನ್ನು ತೊರೆದು ಏಕನಾಥ್‌ ಶಿಂಧೆ ನೇತೃತ್ವದ ಪಾಳಯ ಸೇರಿ ಶಿವಸೇನೆ ಸರ್ಕಾರದ ವಿಭಜನೆಗೆ ಕಾರಣವಾದ ಶಾಸಕರನ್ನು ಪಕ್ಷಕ್ಕೆ ವಾಪಸ್ ತೆಗೆದುಕೊಳ್ಳುವುದಿಲ್ಲ. ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ ವಿಧಾನ ಸಭೆಯಲ್ಲಿ ಒಟ್ಟಾಗಿ ಸ್ಪರ್ಧಿಸುತ್ತದೆ. ಬಿಜೆಪಿ ಎಷ್ಟು ಪೊಳ್ಳು ಎಂಬುದನ್ನು ರಾಜ್ಯದ ಜನರು ತೋರಿಸಿದ್ದಾರೆ. ಲೋಕಸಭಾ ಚುನಾವಣೆಯಿಂದ ಪ್ರಾರಂಭವಾಗಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ಕೂಟದ ಗೆಲುವು ಮುಂಬರುವ

ಶರದ್‌ ಪವಾರ್‌ ಮಾತನಾಡಿ, ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿರುವ ತಮ್ಮ ಸೋದರಳಿಯ ಅಜಿತ್ ಪವಾರ್ ಅವರನ್ನು ಮತ್ತೆ ತಮ್ಮ ಪಕ್ಷಕ್ಕೆ ತೆಗೆದುಕೊಳ್ಳುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹೇಳಿದರು.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್‌ ಅಘಾಡಿ ಕೂಟ ಎನ್‌ಡಿಎ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ನೀಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಕೂಟವನ್ನು ಎದುರಿಸುವ ವಿಶ್ವಾಸವಿದೆ ಎಂದು ಪವಾರ್‌ ತಿಳಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!