ಹೊಸದಿಗಂತ ಆನ್ಲೈನ್ ಡೆಸ್ಕ್:
ಸ್ವಯಂ ಪ್ರೇಯಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕರ್ತವ್ಯಕ್ಕೆ ಹಾಜರಾಗಲು ಇಚ್ಛಿಸುವ ಸಾರಿಗೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದಿದ್ದಾರೆ.
ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಬಸ್ ಇಲ್ಲದೆ ಒದ್ದಾಡುತ್ತಿದ್ದಾರೆ. ಜನರ ಕಷ್ಟಕ್ಕೆ ಸ್ಪಂದಿಸಿ ಸ್ವಯಂ ಪ್ರೇರಣೆಯಿಂದ ಕೆಲಸಕ್ಕೆ ಹಾಜರಾಗುವವರಿಗೆ ಸೂಕ್ತ ರಕ್ಷಣೆ ನೀಡಲಾಗುತ್ತದೆ ಎಂದಿದ್ದಾರೆ.