ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶಾಲೆಗೆ ಹೋದ ಮಕ್ಕಳು ವಾಪಾಸ್ ಮನೆಗೆ ಬಾರದ ಕಾರಣ ಪೋಷಕರು ಕಣ್ಣೀರಿಡುತ್ತಿದ್ದಾರೆ.
ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿಯರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ. ಇತ್ತ ಶಾಲೆಗೂ ಹೋಗದೆ ಮನೆಗೂ ಬಾರದೆ ಕಣ್ಮರೆಯಾಗಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಇನ್ನೂ ಬೆಳಗ್ಗೆ ಶಾಲೆಗೆ ಹೋದವರು ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಶುಕ್ರವಾರ ಇಡೀ ದಿನ ಮಕ್ಕಳಿಗಾಗಿ ಹುಡಕಾಟ ನಡೆಸಿದ್ದಾರೆ.
ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಮಕ್ಕಳನ್ನ ಹುಡುಕಿಕೊಡಿ ಎಂದು ಕೋಲಾರದ ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನೂ ಇಬ್ಬರು ವಿದ್ಯಾರ್ಥಿನಿಯರು ಹತ್ತನೇ ತರಗತಿ ಓದುತ್ತಿದ್ದು, ಎಲ್ಲಿಗೆ ಹೋಗಿದ್ದಾರೆ ಅನ್ನೋ ಮಾಹಿತಿ 24 ಗಂಟೆಯಾದರೂ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಪೋಷಕರು ಹಾಗೂ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಶಾಲೆಗೆಂದು ಹೋದವರು ವಾಪಸ್ ಬರಲೇ ಇಲ್ಲ! ವಿದ್ಯಾರ್ಥಿನಿಯರು ಹೋಗಿದ್ದೆಲ್ಲಿಗೆ?

