ಹೊಸದಿಗಂತ ಡಿಜಿಟಲ್ ಡೆಸ್ಕ್:
ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ದೆಹಲಿ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ಪ್ರಧಾನಿ ಮೋದಿ, ಜೆ.ಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ದೆಹಲಿ ಜನತೆಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.