ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ.ಸೋಮಶೇಖರ್ , ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ ಸೇರಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದರು.
ಕಳೆದ ವರ್ಷ 25.67 ಲಕ್ಷ ರೈತರಿಗೆ 17,108 ಕೋಟಿ ರೂಪಾಯಿ ಸಾಲ ನೀಡುವ ಮೂಲಕ ಶೇ.114 ಗುರಿ ಸಾಧನೆಯನ್ನು ಮಾಡಲಾಗಿತ್ತು. ಈಗ 25.67 ಲಕ್ಷ ರೈತರಲ್ಲಿ ಕೋವಿಡ್ ನಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಜಿಲ್ಲಾವಾರು ರೈತರ ಸಾಲ ಮನ್ನಾ ಪ್ರಕ್ರಿಯೆ ಪಟ್ಟಿ ಕೂಡ ಸಿದ್ಧವಾಗಿದೆ ಎಂದು ಹೇಳಿದರು.