ಕಾಸರಗೋಡು ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಕೊರೋನಾ: ಗುರುವಾರ 1135 ಮಂದಿಗೆ ಪಾಸಿಟಿವ್

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದವರ ಸಂಖ್ಯೆ ಗುರುವಾರ 1000ದ ಗಡಿ ದಾಟಿದೆ. ಅದರಂತೆ 1135 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 1021 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 344 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 46,387 ಹೊಸ ಪ್ರಕರಣ

ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಸೋಂಕು ಮತ್ತಷ್ಟು ವ್ಯಾಪಕವಾಗಿ ಹರಡುತ್ತಿದ್ದು , ಗುರುವಾರ ಹೊಸದಾಗಿ ಬರೋಬ್ಬರಿ 46,387 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 43,176 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 15,388 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 32 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 40.21 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!