ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕಕ್ಕೆ 15ನೇ ಹಣಕಾಸು ಆಯೋಗದಿಂದ ಬರಬೇಕಾದ ಸುಮಾರು 8,000 ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿರುವ ವಿಷಯವನ್ನು ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ.
6,000 ಗ್ರಾಮ ಪಂಚಾಯಿತಿಗಳಿಗೆ ಸಲ್ಲಬೇಕಾದ 2,133 ಕೋಟಿ ರೂ., ನರೇಗಾ ಯೋಜನೆಯ 1,066 ಕೋಟಿ ರೂ. ಹಾಗೂ ಜಲಜೀವನ್ ಮಿಷನ್ ಅಡಿಯಲ್ಲಿ 6,976 ಕೋಟಿ ರೂ.ಗಳನ್ನು ಕೇಂದ್ರ ತಡೆಹಿಡಿದಿದೆ.
ಅನುದಾನ ಬಿಡುಗಡೆಯಾಗದ ಕಾರಣ ಪಂಚಾಯಿತಿ ಸಿಬ್ಬಂದಿ ಹಾಗೂ ನೈರ್ಮಲ್ಯ ಕಾರ್ಮಿಕರ ವೇತನ ಪಾವತಿ ಕಷ್ಟವಾಗಿದೆ. ಬೀದಿ ದೀಪ, ಒಳಚರಂಡಿ ಮತ್ತು ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳ ನಿರ್ವಹಣೆ ಸ್ಥಗಿತಗೊಂಡಿದೆ.
ಇದನ್ನೂ ಓದಿ:
ರಾಜ್ಯ ಸರ್ಕಾರವು ಎಲ್ಲಾ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಪೂರೈಸಿದ್ದರೂ, ಮೊದಲ ಕಂತಿನ 1,092 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡದಿರುವುದು ನ್ಯಾಯಸಮ್ಮತವಲ್ಲ ಎಂದು ಹುಸೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



