ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಆಷಾಢ ಶುಕ್ರವಾರದ ಹಿನ್ನೆಲೆ ವಿಶೇಷ ಪೂಜೆ ನಡೆಯುತ್ತಿದ್ದು, ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ.
ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು. ಸಂಸದರಾದ ಬಳಿಕ ಮೊದಲ ಸಲ ಪೂಜೆಯಲ್ಲಿ ಪಾಲ್ಗೊಂಡರು. ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಇರುತ್ತದೆ.
ಶನಿವಾರ, ಭಾನುವಾರ ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ. ಆಷಾಢ ಮಾಸದ ನಾಲ್ಕು ಶುಕ್ರವಾರ ಶನಿವಾರ ಭಾನುವಾರದಂದು ವಾಹನಗಳಿಗೆ ನಿಷೇಧವಿರುತ್ತದೆ. ಇಂದಿನಿಂದ ಜುಲೈ 14, 19, 21, 26, 28ರವರೆಗೆ ಮತ್ತು ಆಗಷ್ಟ 2ರಿಂದ 4ರವರೆಗೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಕ್ಕೆ ನಿರ್ಬಂಧಿಸಲಾಗಿದೆ.
ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಪಾಸ್ ವ್ಯವಸ್ಥೆ ರದ್ದು ಮಾಡಲಾಗಿದೆ. ಬೆಟ್ಟದಲ್ಲಿ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಸೇವೆ, ತುರ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಪ್ರಸಾದ ವಿತರಿಸುವುದಕ್ಕೆ ಕಡ್ಡಾಯವಾಗಿ ಜಿಲ್ಲಾಡಳಿತದಿಂದ ಅನುಮತಿ ಪತ್ರ ಪಡೆಯಬೇಕಾಗಿದೆ.