ಸಂಕೀರ್ತನಾ ಯಾತ್ರೆಯಲ್ಲಿ ಸಹಸ್ರಾರು ಮಂದಿ ಭಾಗಿ:ಮೊಳಗಿದ ಜೈ ಶ್ರೀರಾಮ್ ಘೋಷಣೆ

ಹೊಸದಿಗಂತ ವರದಿ ಶ್ರೀರಂಗಪಟ್ಟಣ:

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭವಾಗಿದ್ದು, ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ.

ನಿಮಿಷಾಂಬ ದೇವಸ್ಥಾನದಿಂದ ಆರಂಭವಾಗಿರುವ ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳು ಪಾಲ್ಗೊಂಡಿದ್ದು, ಯಾತ್ರೆಯುದ್ಧಕ್ಕೂ ಜೈ ಶ್ರೀರಾಮ್, ಜೈಜೈ ಶ್ರೀರಾಮ್ ಘೋಷಣೆಗಳನ್ನು ಕುಗುತ್ತಾ ಭಕ್ತರು ಸಾಗಿದ್ದಾರೆ.

ಕೋಟೆ ಆಂಜನೇಯ ದೇವಸ್ಥಾನದವರೆಗೂ ಸಂಕೀರ್ತನಾ ಯಾತ್ರೆ ಸಾಗಲಿದ್ದು, ಯಾತ್ರೆಯುದ್ದಕ್ಕೂ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿಯೂ ಎಲ್ಲೆಲ್ಲೆಲ್ಲೂ ಕೇಸರಿ ಬಾವುಟ ರಾರಾಜಿಸುತ್ತಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!